ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ: ಆರೋಪಿ ವಶಕ್ಕೆ

Prasthutha|

ನವದೆಹಲಿ: ಏರ್ ಇಂಡಿಯಾ, ಗೋ ಫಸ್ಟ್‌ ಬಳಿಕ ಇದೀಗ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲೂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

- Advertisement -

ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಅಮೇರಿಕನ್ ಏರ್‌ ಲೈನ್ಸ್ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.
ಬಳಿಕ‌ ಆತನನ್ನು ದೆಹಲಿಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು‌ ಬಂದಿದೆ.

Join Whatsapp