Home ಟಾಪ್ ಸುದ್ದಿಗಳು ಮೂತ್ರ ವಿಸರ್ಜನೆ ಪ್ರಕರಣ: ಆದಿವಾಸಿ ವ್ಯಕ್ತಿಯ ಕಾಲು ತೊಳೆದ ಸಿಎಂ ಶಿವರಾಜ್ ಸಿಂಗ್ ಚೌಹಾಣ್

ಮೂತ್ರ ವಿಸರ್ಜನೆ ಪ್ರಕರಣ: ಆದಿವಾಸಿ ವ್ಯಕ್ತಿಯ ಕಾಲು ತೊಳೆದ ಸಿಎಂ ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆದಿವಾಸಿ ವ್ಯಕ್ತಿ ದಶ್ಮತ್ ರಾವತ್ ಅವರ ಪಾದಗಳನ್ನು ತೊಳೆದಿದ್ದಾರೆ.


ಆದಿವಾಸಿ ಕಾರ್ಮಿಕ ದಶಮತ್ ರಾವತ್ ಎಂಬುವರ ಮೇಲೆ ಮೂತ್ರ ವಿಸರ್ಜನೆ ಮಾಡುವ ಮೂಲಕ ವಿಕೃತಿ ಮೆರೆದ ಬಿಜೆಪಿ ಮುಖಂಡನನ್ನು ಪ್ರವೇಶ್ ಶುಕ್ಲಾನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೆ, ಆತನ ಮನೆಯನ್ನು ಕೂಡ ಧ್ವಂಸ ಮಾಡಲಾಗಿದೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆದಿವಾಸಿ ಕಾರ್ಮಿಕ ದಶಮತ್ ರಾವತ್ ಅವರ ಕಾಲು ತೊಳೆದಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ದಶಮತ್ ರಾವತ್ ಅವರನ್ನು ಕೈ ಹಿಡಿದು ಕರೆದುಕೊಂಡು ಬಂದ ಶಿವರಾಜ್ ಸಿಂಗ್ ಚೌಹಾಣ್ ಅವರು, ಅವರನ್ನು ಕುರ್ಚಿಯ ಮೇಲೆ ಕೂರಿಸಿ ಕಾಲು ತೊಳೆದಿದ್ದಾರೆ.

Join Whatsapp
Exit mobile version