ಮಂಗಳೂರು: ಹೃದಯಾಘಾತಕ್ಕೆ ಉರ್ವ ಠಾಣಾ ಹೆಡ್ ಕಾನ್ ಸ್ಟೇಬಲ್ ವಿಧಿವಶ

Prasthutha|

ಮಂಗಳೂರು: ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಿದ್ಧಾರ್ಥ್ ಜೆ. (41) ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

- Advertisement -


ಮೃತರು ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದವರಾಗಿದ್ದು, ನಗರದ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದರು.
ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ಸಿದ್ಧಾರ್ಥ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಸಹೋದ್ಯೋಗಿಗಳ ಸೂಚನೆಯಂತೆ ಮನೆಗೆ ತೆರಳಿದ್ದರು. ಆದರೆ ಶನಿವಾರ ನಸುಕಿನಜಾವ 3 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಉರ್ವ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿದ್ದ ಸಿದ್ಧಾರ್ಥ್ ಈ ಮೊದಲು ಮಂಗಳೂರು ದಕ್ಷಿಣ (ಪಾಂಡೇಶ್ವರ), ಸಂಚಾರ ಠಾಣೆ ಸಹಿತ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿದ್ದರು.

- Advertisement -



Join Whatsapp