ವಾಷಿಂಗ್ಟನ್: ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿರುವ ನಿರ್ಧಾರವನ್ನು ಅಮೆರಿಕ ಕಾಂಗ್ರೆಸ್ ಸದಸ್ಯ ಆ್ಯಂಡಿ ಲೆವಿನ್ ಸ್ವಾಗತಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ವರ್ಷದ ಬಳಿಕ ಕೃಷಿ ಕಾಯ್ದೆಗಳನ್ನು ಹಿಂಪಡೆದಿರುವುದು ಸಂತೋಷದ ವಿಚಾರವಾಗಿದೆ. ಒಗ್ಗಟ್ಟಾಗಿ ಹೋರಾಡಿದರೆ ಕಾರ್ಪೊರೇಟ್ ಹಿತಾಸಕ್ತಿಗಳನ್ನು ಸೋಲಿಸಿ ಮುನ್ನಡೆಯಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ ಎಂದು ಹೇಳಿದ್ದಾರೆ.
ನಿನ್ನೆ ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ದೇಶವನ್ನು ಉದ್ಧೇಶಿಸಿ ಮಾತನಾಡಿದ್ದ ಮೋದಿ, ಕೃಷಿ ಕಾಯ್ದೆಗಳನ್ನು ರೈತರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಜಾರಿಗೆ ತರಲಾಗಿತ್ತು. ಆದರೆ, ಒಂದು ವರ್ಗದ ರೈತರಿಗೆ ಮನವರಿಕೆ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ, ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿದ್ದೇವೆ. ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಇದಕ್ಕಾಗಿ ಬೇಕಾದ ಸಾಂವಿಧಾನಿಕ ಬದಲಾವಣೆ ಮಾಡಲಾಗುವುದು ’ಎಂದು ಘೋಷಿಸಿದ್ದರು.