ಸಂಚಾರಿ ವಿಜಯ್‌ ನಿಧನಕ್ಕೆ ಅಮೆರಿಕಾ ರಾಯಭಾರ ಕಛೇರಿಯಿಂದ ಕನ್ನಡದಲ್ಲಿ ಸಂತಾಪ!

Prasthutha: June 15, 2021

ಚೆನ್ನೈ: ಬೈಕ್ ಅಪಘಾತಕ್ಕೀಡಾಗಿ ಮೃತಪಟ್ಟ ನಟ ಸಂಚಾರಿ ವಿಜಯ್ ನಿಧನಕ್ಕೆ ಅಮೆರಿಕಾ ರಾಯಭಾರ ಕಛೇರಿ ಕನ್ನಡದಲ್ಲಿ ಸಂತಾಪ ಸೂಚಿಸಿದೆ.  

ಈ ಕುರಿತು ಟ್ವೀಟ್ ಮಾಡಿರುವ ಚೆನ್ನೈನಲ್ಲಿರುವ ಅಮೆರಿಕಾದ ರಾಯಭಾರ ಕಚೇರಿ, “ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಸಂಚಾರಿ ವಿಜಯ್‌ ಭಾಗಿಯಾಗಿದ್ದರು. #RIP” ಎಂದು ಹೇಳಿದೆ.

ಬೈಕ್ ಅಪಘಾತ ಸಂಭವಿಸಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ನಾನು ಅವನಲ್ಲ…ಅವಳು ಎಂಬ ಕನ್ನಡ ಸಿನಿಮಾ ನಟಿಸಿದ್ದ ಚಿಕ್ಕಮಗಳೂರು ಜಿಲ್ಲೆಯ, ಕಡೂರು ತಾಲ್ಲೂಕಿನ ರಂಗಾಪುರ ಗ್ರಾಮದ ವಿಜಯ್‌ ಅವರು 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ