ವಾಷಿಂಗ್ಟನ್: ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆಯನ್ನು ಹಿಂಪಡೆಯುವ ತನ್ನ ನಿರ್ಧಾರವನ್ನು ಅಧ್ಯಕ್ಷ ಜೋ ಬೈಡೆನ್ ಸಮರ್ಥಿಸಿಕೊಂಡಿದ್ದಾರೆ. ಅಮೆರಿಕದ ರಾಷ್ಟ್ರೀಯ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಅತ್ಯುತ್ತಮವೆಂದು ಬಣ್ಣಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಅಮೆರಿಕ ನಡೆಸಿದ ಮುಕ್ತ ಕಾರ್ಯಾಚರಣೆಯಲ್ಲಿ ನಾವು ಸ್ಪಷ್ಟವಾದ ಯಾವುದೇ ಉದ್ದೇಶವನ್ನು ಹೊಂದಿಲ್ಲವೆಂದು ತಿಳಿಸಿದರು.
ಇಪ್ಪತ್ತು ವರ್ಷಗಳಿಂದ ಅಫ್ಘಾನಿಸ್ತಾನದಲ್ಲಿ ಕಾರ್ಯಾಚರಣೆಯನ್ನು ನಡೆಸಿದ ಅಮೆರಿಕ ಅಲ್ಲಿ ಹಲವಾರು ಮಹತ್ವದ ಯೋಜನೆಯನ್ನು ರೂಪಿಸುವಲ್ಲಿ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಿಂದ ತನ್ನ ಸೇನೆಯನ್ನು ಹಿಂಪಡೆದ ನಿರ್ಧಾರ ಸರಿಯಾಗಿದೆ ಮತ್ತು ಅತ್ಯುತ್ತಮ ನಿರ್ಧಾರವಾಗಿದೆ ಎಂದು ಅವರು ಸಮರ್ಥಿಸಿಕೊಂಡರು.
ತಾಲಿಬಾನ್ ಪಡೆ ಇತ್ತೀಚೆಗೆ ಅಫ್ಘಾನಿಸ್ತಾನವನ್ನು ಮತ್ತೆ ವಶಪಡಿಸಿಕೊಂಡಿದೆ. ಮಾತ್ರವಲ್ಲದೆ ಆಗಸ್ಟ್ 31 ರಂದು ಅಮೆರಿಕ ಸೇನೆ ಅಫ್ಘಾನ್ ನಿಂದ ಪೂರ್ಣ ಪ್ರಮಾಣದಲ್ಲಿ ವಾಪಸು ಪಡೆದ ಹಿನ್ನೆಲೆಯಲ್ಲಿ ಜೋ ಬೈಡನ್ ಈ ಹೇಳಿಕೆ ನೀಡಿದ್ದಾರೆ.