ಅಮೆರಿಕ ಅಧ್ಯಕ್ಷೀಯ ಚುನಾವಣೆ ಶಾಂತಿಯುತವಾಗಿ ನಡೆಯುವುದು ಅನುಮಾನ: ಜೋ ಬೈಡನ್‌

Prasthutha|

ವಾಷಿಂಗ್ಟನ್‌: ನವೆಂಬರ್‌ 5ರ ಅಧ್ಯಕ್ಷೀಯ ಚುನಾವಣೆ ಶಾಂತಿಯುತವಾಗಿ ನಡೆಯುವುದು ಅನುಮಾನ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

- Advertisement -


2020ರ ಅಧ್ಯಕ್ಷೀಯ ಚುನಾವಣೆ ಸೋಲನ್ನು ಡೊನಾಲ್ಡ್ ಟ್ರಂಪ್ ಅವರು ಈಗಲೂ ಒಪ್ಪಿಕೊಳ್ಳುವುದಿಲ್ಲ ಎನ್ನುವುದನ್ನು ಉಲ್ಲೇಖಿಸಿ ಅವರು ಹೀಗೆ ನುಡಿದಿದ್ದಾರೆ.

ಚುನಾವಣೆ ಪ್ರಚಾರದ ವೇಳೆ ಬಳಕೆಯಾಗುತ್ತಿರುವ ಆಕ್ರಮಣಕಾರಿ ಭಾಷೆಯ ಬಗ್ಗೆ ಸಂಸದರು ಹಾಗೂ ವಿಶ್ಲೇಷಕರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಬೈಡನ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.‘ಮುಂದಿನ ಚುನಾವಣೆಯು ಮುಕ್ತ ಹಾಗೂ ನ್ಯಾಯಸಮ್ಮತವಾಗಿರಲಿದೆ ಎನ್ನುವ ವಿಶ್ವಾಸ ಇದೆ. ಆದರೆ ಶಾಂತಿಯುವಾಗಿರುತ್ತದೆಯೋ ಎನ್ನುವುದರ ಬಗ್ಗೆ ಗೊತ್ತಿಲ್ಲ’ ಎಂದು ಹೇಳಿದ್ದಾರೆ.

- Advertisement -

‘ಟ್ರಂಪ್ ಅವರು ನೀಡಿದ ಹೇಳಿಕೆಗಳು ಹಾಗೂ ಈ ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅವರ ಮಾತುಗಳು ಅಪಾಯಕಾರಿ’ ಎಂದು ಬೈಡನ್ ಹೇಳಿದ್ದಾರೆ.



Join Whatsapp