Home ಟಾಪ್ ಸುದ್ದಿಗಳು ತ್ರಿಪುರಾದಲ್ಲಿ ಮುಸ್ಲಿಮ್ ವಿರೋಧಿ ಹಿಂಸಾಚಾರದ ಕುರಿತು USCIRF ತೀವ್ರ ಕಳವಳ

ತ್ರಿಪುರಾದಲ್ಲಿ ಮುಸ್ಲಿಮ್ ವಿರೋಧಿ ಹಿಂಸಾಚಾರದ ಕುರಿತು USCIRF ತೀವ್ರ ಕಳವಳ

ವಾಷಿಂಗ್ಟನ್: ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ ನ್ಯಾಷನಲ್ ರಿಲಿಜಿಯಸ್ ಫ್ರೀಡಂ (USCIRF) ನ ಅಧ್ಯಕ್ಷೆ ನಡಿನ್ ಮೈಂಝಾ ಅವರು, ತ್ರಿಪುರಾದಲ್ಲಿ ನಡೆಯುತ್ತಿರುವ ಮುಸ್ಲಿಮ್ ವಿರೋಧಿ ಹಿಂಸಾಚಾರದ ಸಂತ್ರಸ್ತರ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಮಾತ್ರವಲ್ಲ ಧಾರ್ಮಿಕ ಸಮುದಾಯಗಳ ವಿರುದ್ಧ ಹಿಂಸಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಸರ್ಕಾರ ಸೂಕ್ತ ಕ್ರಮ ಜರುಗಿಸಲಿ ಎಂದು ತಾಕೀತು ಮಾಡಿದ್ದಾರೆ.

ತ್ರಿಪುರಾದಲ್ಲಿ ವ್ಯವಸ್ಥಿತವಾಗಿ ನಡೆಸಿದ ಕೋಮುಗಲಭೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ನಿರಂತರ ಹಲ್ಲೆ, ಮಸೀದಿಗಳ ಧ್ವಂಸ, ಅಂಗಡಿಗಳನ್ನು ನಾಶಪಡಿಸಲಾಗಿದೆ ಎಂದು ಮೈಂಝಾ ಅವರು ತೀವ್ರ ಕಳವಳವನ್ನು ವ್ಯಕ್ತಪಡಿಸಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರವನ್ನು ಪ್ರತಿಭಟಿಸುವ ನೆಪದಲ್ಲಿ ವಿ.ಎಚ್.ಪಿ. ಆಯೋಜಿಸಿದ್ದ ಜಾಥಾದಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು.

ಈ ಕುರಿತು USCIRF, ಮುಸ್ಲಿಮರ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಮಾತ್ರವಲ್ಲ ಭಾರತ ಸರ್ಕಾರ ಧಾರ್ಮಿಕ ಸಮುದಾಯಗಳ ವಿರುದ್ಧದ ಹಿಂಸಚಾರವನ್ನು ನಿಲ್ಲಿಸಬೇಕು ಎಂದು ಯು.ಎಸ್.ಸಿ.ಐ.ಆರ್.ಎಫ್ ಮೆಂಝಾ ಪರವಾಗಿ ಟ್ವೀಟ್ ಮಾಡಿದೆ.

Join Whatsapp
Exit mobile version