ಗೋವಾ: ದೇಶದಾದ್ಯಂತ ಇಂಧನ ದರಗಳು ದಾಖಲೆ ಮಟ್ಟದಲ್ಲಿ ಏರುತ್ತಿದ್ದಂತೆ ನಿಮಗೆ ಪೆಟ್ರೋಲ್, ಡೀಸೆಲ್ ಖರೀದಿಸಲು ಸಾಧ್ಯವಾಗದಿದ್ದರೆ ಎಲೆಕ್ಟ್ರಿಕಲ್ ವಾಹನಗಳನ್ನು ಕೊಂಡುಕೊಳ್ಳಿ ಎಂದು ಬಿಜೆಪಿ ಸಚಿವ ನೀಲೇಶ್ ಕಬ್ರಾಲ್ ನೀಡಿರುವ ಸಲಹೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೆ ಇದೆ. ಗ್ಯಾಸ್ ಸಿಲಿಂಡರ್, ಅಡುಗೆ ಎಣ್ಣೆ ಸೇರಿದಂತೆ ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಈ ನಡುವೆ ಗೋವಾ ಬಿಜೆಪಿ ಸಚಿವರ ಈ ವಿಚಿತ್ರ ಸಲಹೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಎಲೆಕ್ಟ್ರಿಕ್ ವಾಹನಗಳನ್ನು ಖರೀದಿ ಮಾಡಲು ಸರ್ಕಾರ ರಿಯಾಯ್ತಿಯನ್ನು ನೀಡುತ್ತದೆ ಎಂದ್ದಿದ್ದಾರೆ.