Home ಟಾಪ್ ಸುದ್ದಿಗಳು ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ರಾಜ್ಯ ಬಿಜೆಪಿಯ ಹುಟ್ಟುಗುಣ: ಸಿದ್ದರಾಮಯ್ಯ

ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ರಾಜ್ಯ ಬಿಜೆಪಿಯ ಹುಟ್ಟುಗುಣ: ಸಿದ್ದರಾಮಯ್ಯ

ಬೆಂಗಳೂರು: ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ರಾಜ್ಯ ಬಿಜೆಪಿಯ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

 ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದು ಅವರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು. ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಬಿಜೆಪಿ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Join Whatsapp
Exit mobile version