Home ಟಾಪ್ ಸುದ್ದಿಗಳು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆಯಾಗಿ ಯು.ಟಿ. ಫರ್ಝಾನ ನೇಮಕ

ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆಯಾಗಿ ಯು.ಟಿ. ಫರ್ಝಾನ ನೇಮಕ

ಬೆಂಗಳೂರು: ಕೆಪಿಸಿಸಿ ವಕ್ತಾರರಾದ ಯುಟಿ ಫರ್ಝಾನ ಅಶ್ರಫ್ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸಿಂಡಿಕೇಟ್ ಮೆಂಬರ್ ಆಗಿ ನೇಮಕ ಆಗಿದ್ದಾರೆ.

ಫರ್ಝಾನ ಅವರ ಶೈಕ್ಷಣಿಕ ಹಿನ್ನೆಲೆಯನ್ನು ಗಮನಿಸಿ ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿಯ ಸಿಂಡಿಕೇಟ್‌ ಗೆ ನಾಮನಿರ್ದೇಶನ‌ ಮಾಡಿರುವುದಾಗಿ ತಿಳಿದು ಬಂದಿರುತ್ತದೆ.

ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಫರ್ಝಾನಾ ಅವರು ಪ್ರಸ್ತುತ ಪ್ರಜಾವಾಣಿಯ ಮಾಸ್ಟರ್ ಮೈಂಡ್ ಪತ್ರಿಕೆಯ ಸೀನಿಯರ್ ಮೆನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರಿನ ವಿವಿಧ ಐಎಎಸ್ ಅಕಾಡೆಮಿಗಳಲ್ಲಿ ತರಬೇತಿ ನೀಡುತ್ತಿದ್ದಾರೆ. 2015 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಯಲ್ಲಿ ಸಂದರ್ಶನದವರೆಗೂ ತಲುಪಿದ್ದ ಅವರು ತಮ್ಮ ಹುದ್ದೆಗಾಗಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.

Join Whatsapp
Exit mobile version