ಲಾಕ್‌ಡೌನ್ ಪ್ಯಾಕೇಜ್ ನಲ್ಲಿ ಶಿಕ್ಷಕರ ಕಡೆಗಣನೆ | ಮಾಜಿ ಸಚಿವ ಯುಟಿ ಖಾದರ್ ಆಕ್ರೋಶ

Prasthutha|

ಮಂಗಳೂರು : ಕೋವಿಡ್ ಲಾಕ್ ಡೌನ್ ಪ್ಯಾಕೇಜ್ ನಲ್ಲಿ ಶಿಕ್ಷಕರನ್ನು ಕಡೆಗಣಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಸಚಿವ ಯುಟಿ ಖಾದರ್ ಟೀಕಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲದಲ್ಲಿ ಇದ್ದಾರೆ. ಶಿಕ್ಷಣ ವಿಚಾರದಲ್ಲಿ ರಾಜ್ಯ ಸರ್ಕಾರದಲ್ಲಿ ಸ್ಪಷ್ಟವಾದ ನಿಲುವು ಇಲ್ಲ. ರಾಜ್ಯ ಸರ್ಕಾರವು ಶಿಕ್ಷಕರನ್ನು ಭಿಕ್ಷುಕರನ್ನಾಗಿ ಮಾಡಿದೆ. ಕೋವಿಡ್ ಲಾಕ್ ಡೌನ್ ಪ್ಯಾಕೇಜ್ ನಲ್ಲಿ ಶಿಕ್ಷಕರನ್ನು ಕಡೆಗಣಿಸಲಾಗಿದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನ ರಹಿತ ಶಿಕ್ಷಕರಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕು.ಶಿಕ್ಷಣ ಸಚಿವರು ಪ್ರತಿನಿತ್ಯ ಒಂದು ಒಂದು ಹೇಳಿಕೆ ಕೊಟ್ಟು ಪೋಷಕರಿಗೆ ಮತ್ತು ಮಕ್ಕಳಿಗೆ ಗೊಂದಲ ಸೃಷ್ಟಿಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯವು ಅಕಾಡಮಿಕ್ ವಿಚಾರದಲ್ಲಿ ಗೊಂದಲದಲ್ಲಿದೆ. ವಿಧ್ಯಾರ್ಥಿಗಳು ಮತ್ತು ಪೋಷಕರು ಕೋವಿಡ್ ಗಿಂತ ಶಿಕ್ಷಣ ವಿಚಾರದಲ್ಲಿ ಸಾಕಷ್ಟು ಸಮಸ್ಯೆಯಲ್ಲಿದ್ದಾರೆ. ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ಶಿಕ್ಷಣ ಸಚಿವರು ಕೊಡಬೇಕು ಎಂದು ಮನವಿ ಮಾಡಿದ್ದಾರೆ.

- Advertisement -

ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ಲಸಿಕೆ ಲಾಜಿಕ್ ಬಗ್ಗೆ ಜನಪ್ರತಿನಿಧಿಗಳು ತಿಳಿದುಕೊಳ್ಳಬೇಕು. ಲಸಿಕೆಗಳ ವಿಚಾರದಲ್ಲಿ ನಾನು ಜನರ ದಾರಿ ತಪ್ಪಿಸಿದ ಉದಾಹರಣೆ ಇದ್ರೆ ರಾಜಕೀಯ ನಿವೃತ್ತಿ ಮಾಡುತ್ತೇನೆ ಎಂದು ಖಾದರ್ ಹೇಳಿದ್ದಾರೆ.  

Join Whatsapp