ಅಫ್ಘಾನ್ ನಲ್ಲಿರುವ ಕನ್ನಡಿಗರ ರಕ್ಷಣೆಗೆ ಮುಂದಾಗುವಂತೆ ಸಿಎಂಗೆ ಪತ್ರ ಬರೆದ ಯು.ಟಿ.ಖಾದರ್

Prasthutha|

ಮಂಗಳೂರು: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದಿರುವ ಈ ಸಂದರ್ಭದಲ್ಲಿ ವಿವಿಧ ದೇಶಗಳ ನಾಗರಿಕರು ಸಮಸ್ಯೆ ಎದುರಿಸುತ್ತಿದ್ದು, ಇದರಲ್ಲಿ ಭಾರತೀಯರಾದ ಕನ್ನಡಿಗರು ಕೂಡಾ ಸೇರಿದ್ದಾರೆ. ತಕ್ಷಣ ರಾಜ್ಯ ಸರಕಾರ ಈ ಬಗ್ಗೆ ಗಮನ ಹರಿಸಿ ಕನ್ನಡಿಗರ ರಕ್ಷಣೆಗೆ ಮುಂದಾಗಬೇಕೆಂದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿರವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

- Advertisement -


ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಕನ್ನಡಿಗರು ಅಫ್ಘಾನ್ ದೇಶದಲ್ಲಿ ವಿವಿಧ ವೃತ್ತಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚಿನ ತಾಲಿಬಾನ್ ಬೆಳವಣಿಗೆಯಿಂದಾಗಿ ಅಲ್ಲಿನ ಕನ್ನಡಿಗರ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಈ ಕನ್ನಡಿಗರನ್ನು ಹಾಗೂ ಅವರ ಕುಟುಂಬಸ್ಥರನ್ನು ರಾಜ್ಯಕ್ಕೆ ವಾಪಸ್ಸು ಕರೆತರಲು ರಾಜ್ಯ ಸರ್ಕಾರ ಸೂಕ್ತ ಕ್ರಮವಹಿಸಬೇಕು. ಅಫ್ಘಾನ್ ನಲ್ಲಿರುವ ಕನ್ನಡಿಗರ ಕುಟುಂಬಸ್ಥರ ಮಾಹಿತಿಗಾಗಿ ಹಾಗೂ ಧೈರ್ಯ ತುಂಬಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಬೇಕು ಎಂದು ಯುಟಿ ಖಾದರ್ ಪತ್ರದಲ್ಲಿ ಮನವಿ ಮಾಡಿದ್ದಾರೆ.

Join Whatsapp