ಕೊರೊನಾ ಆತಂಕ | `ಚಾರ್ ಧಾಮ್ ಯಾತ್ರೆ’ ಸ್ಥಗಿತಗೊಳಿಸಿದ ಉತ್ತರಾಖಂಡ ಸರ್ಕಾರ

Prasthutha|

ಹೊಸದಿಲ್ಲಿ : ದೇಶಾದ್ಯಂತ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಸಾವು ನೋವುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಈ ವರ್ಷದ ‘ಚಾರ್ ಧಾಮ್ ಯಾತ್ರೆ’ಯನ್ನು ಉತ್ತರಾಖಂಡ ಸರ್ಕಾರ ಸ್ಥಗಿತಗೊಳಿಸಿದೆ.

ಈ ಕುರಿತು ಹೇಳಿಕೆ ನೀಡಿದ ಮುಖ್ಯ ಮಂತ್ರಿ ತೀರತ್ ಸಿಂಗ್ ರಾವತ್, ದೇವಾಲಯದ ನಾಲ್ಕು ಪುರೋಹಿತರು ಮಾತ್ರ ಧಾರ್ಮಿಕ ವಿಧಿಗಳು ಮತ್ತು ಪೂಜೆಯನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

- Advertisement -

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,79,257 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 3,645 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 2,69,507 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

- Advertisement -