Home ಟಾಪ್ ಸುದ್ದಿಗಳು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 10 ನವಜಾತ ಶಿಶುಗಳು ಸಜೀವ ದಹನ

ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 10 ನವಜಾತ ಶಿಶುಗಳು ಸಜೀವ ದಹನ

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ಕೆನ್ನಾಲಿಗೆ ಶಿಶು ತೀವ್ರ ನಿಗಾ ಘಟಕ (ಎನ್‌ಐಸಿಯು)ದ ಸುತ್ತಲೂ ಆವರಿಸಿದೆ. ಬೆಂಕಿ ಹೊತ್ತುಕೊಂಡಂತೆಯೇ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಾಡ ತೊಡಿಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಆಘಾತಗೊಂಡಿದ್ದು, ವೈದ್ಯರು ಮತ್ತು ಇತರೆ ಸಿಬ್ಬಂದಿ ವಾರ್ಡ್‌ನ ಕಿಟಕಿ ಗಾಜುಗಳನ್ನು ಒಡೆದು ಅವುಗಳ ಮೂಲಕ ರೋಗಿಗಳನ್ನು ಹೊರಕ್ಕೆ ಕಳುಹಿಸಿದ್ದಾರೆ.

ಆದರೆ, ಅಷ್ಟರಲ್ಲಾಗಲೇ 10 ಶಿಶುಗಳು ಸಜೀವ ದಹನವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತಲುಪುವ ವೇಳೆಗಾಗಲೇ ಎನ್‌ಐಸಿಯು ವಾರ್ಡ್ ದಟ್ಟ ಹೊಗೆಯಿಂದ ತುಂಬಿಕೊಂಡಿತ್ತು. ದುರ್ಘಟನೆಯಲ್ಲಿ ಸುಮಾರು 10 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ. ಈ ನಡುವೆ ವಾರ್ಡ್‌ನ ಕಿಟಕಿ ಒಡೆದು ಹಲವು ಕಂದಮ್ಮಗಳನ್ನು ರಕ್ಷಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.

Join Whatsapp
Exit mobile version