Home ಟಾಪ್ ಸುದ್ದಿಗಳು ಗಲಭೆ ಸೃಷ್ಟಿಸುವವರ ವಿರುದ್ಧ ಉತ್ತರ ಪ್ರದೇಶ ರೀತಿ ಕ್ರಮ : ಆರಗ ಜ್ಞಾನೇಂದ್ರ

ಗಲಭೆ ಸೃಷ್ಟಿಸುವವರ ವಿರುದ್ಧ ಉತ್ತರ ಪ್ರದೇಶ ರೀತಿ ಕ್ರಮ : ಆರಗ ಜ್ಞಾನೇಂದ್ರ

ಶಿವಮೊಗ್ಗ: ಗಲಭೆ ಸೃಷ್ಟಿಸುವವರ ವಿರುದ್ಧ ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶದ ರೀತಿ ಕ್ರಮ ಕೈಗೊಳ್ಳುವ ಬಗ್ಗೆ  ಮುಖ್ಯಮಂತ್ರಿ ಬೊಮ್ಮಾಯಿ ಚಿಂತನೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮೆರವಣಿಗೆ, ಉತ್ಸವ ನಡೆಯುವಾಗ ಗಲಾಟೆ, ಕಲ್ಲು ಹೊಡೆಯುವ ಪ್ರಕರಣಗಳು ನಡೆಯುತ್ತಿದೆ. ಇಂತಹ ಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಚಿಂತನೆ ಸರ್ಕಾರದ ಮುಂದಿದೆ ಎಂದು ಹೇಳಿದರು.

Join Whatsapp
Exit mobile version