ಉತ್ತರ ಪ್ರದೇಶ | ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

Prasthutha|

ನವದೆಹಲಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್‌ ಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸಿದೆ.

- Advertisement -

ಡಿಸೆಂಬರ್ 12 ರಂದು ಸೋನಭದ್ರಾ ಜಿಲ್ಲಾ ಹೆಚ್ಚುವರಿ ನ್ಯಾಯಾಲಯವು ಶಾಸಕ ಗೊಂಡ್ ತಪ್ಪಿತಸ್ಥ ಎಂದು ಘೋಷಿಸಿತ್ತು. ಆತ 2014 ರಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದು ಸಾಕ್ಷ್ಯಾಧಾರಗಳಿಂದ ರುಜುವಾತಾಗಿದೆ ಎಂದು ತೀರ್ಪು ನೀಡಿತ್ತು.

ಶಾಸಕನ ಮೇಲೆ ಐಪಿಸಿ ಸೆಕ್ಷನ್ 376, 506 ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Join Whatsapp