ಮಿರ್ಝಾಪುರ: ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಆರೋಪದಲ್ಲಿ ಚರ್ಚ್ ಒಂದನ್ನು ಜಿಲ್ಲಾಡಳಿತ ನೆಲಸಮಗೊಳಿಸಿರುವ ಘಟನೆ ಉತ್ತರ ಪ್ರದೇಶದ ಮಿರ್ಝಾಪುರದಲ್ಲಿ ನಡೆದಿದೆ.
ವರದಿಗಳ ಪ್ರಕಾರ, ಈ ಚರ್ಚ್ ಅನ್ನು ವಿನೋದ್ ಕುಮಾರ್ ಹಾಗೂ ರಮಾಕಾಂತ್ ಎಂಬ ಇಬ್ಬರು ವ್ಯಕ್ತಿಗಳು ಅಹಿರುರ ಅರಣ್ಯ ಪ್ರದೇಶದಲ್ಲಿ ನಿರ್ಮಿಸಿದ್ದರು ಎಂದು ಹೇಳಲಾಗಿದೆ.
ಧಾರ್ಮಿಕ ಮತಾಂತರ ನಡೆಸಲಾಗುತ್ತಿದೆ ಎಂಬ ಹಲವಾರು ದೂರುಗಳ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಚರ್ಚ್ ಅನ್ನು ಅಕ್ರಮವಾಗಿ ನಿರ್ಮಿಸಿರುವುದು ಕಂಡು ಬಂದಿದೆ.
ಈ ಪ್ರಕರಣವು ಕೂಡಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೆಟ್ಟಿಲೇರಿದ್ದು, ವಿನೋದ್ ಕುಮಾರ್ ಹಾಗೂ ರಮಾಕಾಂತ್ ಇಬ್ಬರಿಗೂ ನ್ಯಾಯಾಲಯದೆದುರು ಹಾಜರಾಗುವಂತೆ ನೋಟಿಸ್ ಜಾರಿಯಾಗಿದೆ.
In #UttarPradesh’s #Mirzapur, authorities have demolished an allegedly illegal church built on forest department land. This action is part of a larger crackdown on alleged religious conversion activities in marginalized tribal areas.
— Hate Detector 🔍 (@HateDetectors) August 12, 2024
According to the report, the demolition was… pic.twitter.com/8SQ4dZzw8F