Home ಟಾಪ್ ಸುದ್ದಿಗಳು ಉತ್ತರಪ್ರದೇಶ| ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಮೃತ್ಯು

ಉತ್ತರಪ್ರದೇಶ| ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಮೃತ್ಯು

ಲಕ್ನೋ: ಉತ್ತರಪ್ರದೇಶದಲ್ಲಿ ತಡರಾತ್ರಿ ಕಾರು ಹಾಗು ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಸುಲ್ತಾನ್’ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ನೌಶಾದ್ ಖಾನ್ (42) ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ನೌಶಾದ್ ಅವರು ತಮ್ಮ ಕಾರಿನಲ್ಲಿ ಸೋಮವಾರ ಸಂಜೆ ಮನೆಗೆ ಹಿಂದಿರುಗುತ್ತಿದ್ದಾಗ ಗೊಸಿಯಾಗಂಜ್ ಪ್ರದೇಶದಲ್ಲಿರುವ ತತಿಯಾನಗರ್ ಬಳಿ ಟ್ರಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ ಕಾಂಗ್ರೆಸ್ ಘಟಕವು, ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದೆ.

Join Whatsapp
Exit mobile version