Home ಟಾಪ್ ಸುದ್ದಿಗಳು ಉತ್ತರ ಪ್ರದೇಶ | ದೇವಸ್ಥಾನದ ಆವರಣದಲ್ಲಿ ಗುಂಡು ಹಾರಾಟ; ವೀಡಿಯೋ ವೈರಲ್

ಉತ್ತರ ಪ್ರದೇಶ | ದೇವಸ್ಥಾನದ ಆವರಣದಲ್ಲಿ ಗುಂಡು ಹಾರಾಟ; ವೀಡಿಯೋ ವೈರಲ್

ಬರೇಲಿ: ದೇವಸ್ಥಾನದ ಶಾಸ್ತ್ರ ಪೂಜೆಯಲ್ಲಿ ಪಾಲ್ಗೊಂಡವರು ಗಾಳಿಯಲ್ಲಿ ಗುಂಡು ಹಾರಾಟ ನಡೆಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಈ ಕುರಿತ ವೀಡಿಯೋವನ್ನು ಪಿಯೂಷ್ ರೈ ಎಂಬಾತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ವಿವಿಧ ಮಾದರಿಯ ಬಂದೂಕುನಿಂದ ಗಾಳಿಯಲ್ಲಿ ಗುಂಡು ಹಾರಾಟ ನಡೆಸುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

ಘಟನೆಯ ಕುರಿತು ಮಾಹಿತಿ ನೀಡಿರುವ ಬರೇಲಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಭಾಟಿಪ್ಸ್, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ ಕೆಲವರು ಗುಂಡು ಹಾರಾಟ ಮಾಡುತ್ತಿರುವುದು ಕಂಡುಬಂದಿದೆ. ಬರೇಲಿ ಪೊಲೀಸ್ ಠಾಣಾ ವ್ಯಾಪ್ತಿಯ ಬರದರಿ ಸಮೀಪದಲ್ಲಿ ಈ ವೀಡಿಯೋವನ್ನು ಚಿತ್ರೀಕರಿಸಲಾಗಿದ್ದು, ಇದರ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

Join Whatsapp
Exit mobile version