ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ ರಾಜಕಾರಣಿಗಳು, ಅಧಿಕಾರಿಗಳು| ತನಿಖೆಗೆ ಆದೇಶ

Prasthutha|

ಲಖ್ನೋ: ರಾಮಮಂದಿರದ ಬಗ್ಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಳಿಕ ರಾಜಕಾರಣಿಗಳು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ.

- Advertisement -

ರಾಮಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್ ನವೆಂಬರ್ 9, 2019 ರಂದು ತೀರ್ಪು ನೀಡಿತ್ತು.
ಅಯೋಧ್ಯೆಯಲ್ಲಿ ಭೂಮಿ ಖರೀದಿಸಿರುವ ಬಗ್ಗೆ ತನಿಖಾ ವರದಿಯನ್ನು ಪ್ರಕಟಿಸಿದ್ದ ಮಾಧ್ಯಮವೊಂದರ ವರದಿಯನ್ನು ಪರಿಗಣಿಸಿರುವ ಉತ್ತರಪ್ರದೇಶ ಸರ್ಕಾರ ಈ ಕುರಿತು ತನಿಖೆ ನಡೆಸಿ ವಾರದೊಳಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದೆ.

“ಪತ್ರಿಕೆಯ ವರದಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗಮನಕ್ಕೆ ತೆಗೆದುಕೊಂಡಿದ್ದಾರೆ. ಅವರ ನಿರ್ದೇಶನದ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ. ವಿಶೇಷ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯೊಬ್ಬರು ತನಿಖೆಯ ನೇತೃತ್ವ ವಹಿಸಲಿದ್ದಾರೆ. ವಾರದೊಳಗೆ ಸೂಕ್ತ ದಾಖಲೆಗಳೊಂದಿಗೆ ವರದಿ ನೀಡುವಂತೆ ಮುಖ್ಯಮಂತ್ರಿಗಳು ಕೇಳಿದ್ದಾರೆ” ಎಂದು ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ಮನೋಜ್ ಕುಮಾರ್ ಸಿಂಗ್ ಹೇಳಿದ್ದಾರೆ.

- Advertisement -

ಕನಿಷ್ಠ 15 ಮಂದಿ ಸ್ಥಳೀಯ ಶಾಸಕರು, ಅಯೋಧ್ಯೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಥವಾ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳ ಸಂಬಂಧಿಗಳು ಮತ್ತು ಭೂ ವ್ಯವಹಾರಗಳನ್ನು ನಡೆಸುವ ಸ್ಥಳೀಯ ಕಂದಾಯ ಅಧಿಕಾರಿಗಳು ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದವರಲ್ಲಿ ಸೇರಿದ್ದಾರೆ ಎಂದು ಇಂಡಿಯನ್ ಎಕ್ಸ್’ಪ್ರೆಸ್ ವರದಿ ಮಾಡಿತ್ತು.

Join Whatsapp