ಉತ್ತರ ಪ್ರದೇಶ: ಮುಸ್ಲಿಮ್ ಯುವಕನ ಲಾಕಪ್ ಡೆತ್ ಕುರಿತು ಸಮಗ್ರ ತನಿಖೆಗೆ ಮಾಯಾವತಿ ಒತ್ತಾಯ

Prasthutha|

ಲಕ್ನೋ : ಉತ್ತರ ಪ್ರದೇಶದ ಕಸ್ ಗಂಜ್ ಜಿಲ್ಲೆಯಲ್ಲಿ ನಡೆದ ಲಾಕಪ್ ಡೆಟ್ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಬಿಎಸ್ ಪಿ ವರಿಷ್ಠೆ ಮಾಯಾವತಿ ಒತ್ತಾಯಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಠಾಣೆಗೆ ಕರೆಸಲಾಗಿದ್ದ 22 ವರ್ಷ ಪ್ರಾಯದ ಅಲ್ತಾಫ್ ಮಂಗಳವಾರ ಪೊಲೀಸರ ವಶದಲ್ಲಿದ್ದಾಗಲೇ ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ. ಆತನ ಕುಟುಂಬದ ಸದಸ್ಯರು ಪೊಲೀಸರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರ ವಶದಲ್ಲಿ ಮತ್ತೊಬ್ಬ ಯುವಕ ಮೃತಪಟ್ಟಿದ್ದು, ಇದು ನಾಚಿಕೆಗೇಡು. ಸರ್ಕಾರ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.


ಉತ್ತರ ಪ್ರದೇಶದ ಇಟಾಕ್ ಜಿಲ್ಲೆಯಲ್ಲಿ 22 ವರ್ಷದ ಯುವಕ ಅಲ್ತಾಫ್ ನನ್ನು ಮಹಿಳೆಯೊಬ್ಬರ ಅಪಹರಣ ಮತ್ತು ಬಲವಂತದ ಮದುವೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವೊಂದರ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಘಟನೆಯ ಕುರಿತು ಟ್ವಿಟ್ಟರ್ ನಲ್ಲಿ ವೀಡಿಯೋ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದ ಇಟಾಕ್ ನ ಪೊಲೀಸ್ ಮುಖ್ಯಸ್ಥ ರೋಹನ್ ಪ್ರಮೋದ್ ಬೋತ್ರೆ ಅವರು ಶೌಚಾಲಯದಲ್ಲಿ ಅಲ್ತಾಫ್ ನೇಣು ಬಿಗಿದು ಆತ್ಮಹತ್ಯೆ ನಡೆಸಿದ್ದಾರೆ ಎಂದು ತಿಳಿಸಿದ್ದರು.

- Advertisement -

ಪೊಲೀಸರ ಈ ಅರೋಪವನ್ನು ನಿರಾಕರಿಸಿರುವ ಅಲ್ತಾಫ್ ನ ಕುಟುಂಬ, ಯಾರದೋ ಒತ್ತಡಕ್ಕೆ ಮಣಿದು ಪೊಲೀಸರು ವ್ಯವಸ್ಥಿತವಾಗಿ ಅಲ್ತಾಫ್ ನನ್ನು ಕೊಲೆ ಮಾಡಿದ್ದಾರೆ ಎಂದು ದೂರಿದೆ.
ಪೊಲೀಸರು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಐವರನ್ನು ಅಮಾನತುಗೊಳಿಸಲಾಗಿದೆ ಎಂದು ಪ್ರಮೋದ್ ತಿಳಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಅಲ್ತಾಫ್ ನ ಕೊಲೆಯ ಕುರಿತು ನಿಷ್ಪಕ್ಷಪಾತ ಉನ್ನತ ತನಿಖೆ ನಡೆಸಬೇಕು ಎಂದು ಕುಟುಂಬದ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.



Join Whatsapp