ಲಕ್ನೋ: 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ವೀಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ಅಪರಾಧಕ್ಕೆ ಸಹಾಯ ಮಾಡಿದ ಮಹಿಳೆಯನ್ನು ಸೇರಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆಯ ತಾಯಿ ಹರ್ದುವಾಗಂಜ್ ಪೊಲೀಸ್ ಠಾಣೆಯಲ್ಲಿ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಅಪರಾಧದ ಬಗ್ಗೆ ಯಾರಿಗಾದರೂ ಹೇಳಲು ಧೈರ್ಯ ಮಾಡಿದರೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ, ಐಪಿಸಿ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆ), 342 (ಅಕ್ರಮ ಬಂಧನ), 120-ಬಿ (ಕ್ರಿಮಿನಲ್ ಪಿತೂರಿ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ ಗಳ ಅಡಿಯಲ್ಲಿ ಮೂವರು ಪುರುಷರು ಮತ್ತು ಒಬ್ಬ ಮಹಿಳೆಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಇಡೀ ವಿಷಯವನ್ನು ವಿವರವಾಗಿ ತನಿಖೆ ಮಾಡಲಾಗುತ್ತಿದೆ ಅಧಿಕಾರಿಗಳು ತಿಳಿಸಿದ್ದಾರೆ.
13 ವರ್ಷದ ಬಾಲಕಿಯನ್ನು ನೆರೆಮನೆಯ ಮಹಿಳೆ ಭಾನುವಾರ ಮಧ್ಯಾಹ್ನ ತನ್ನ ಮನೆಗೆ ಕರೆದೊಯ್ದು ಕೋಣೆಯಲ್ಲಿ ಕೂಡಿಹಾಕಿದ್ದಳು. ಅಲ್ಲಿ ಮೂವರು ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ ಕೃತ್ಯವನ್ನು ಚಿತ್ರೀಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ದೂರು ದಾಖಲಿಸಲು ಹತ್ತಿರದ ಪೊಲೀಸ್ ಹೊರಠಾಣೆಯನ್ನು ಸಂಪರ್ಕಿಸಿದಾಗ ಅಲ್ಲಿನ ಪೊಲೀಸರು ಆರೋಪಿಗಳೊಂದಿಗೆ ರಾಜಿ ಮಾಡಿಕೊಳ್ಳುವಂತೆ ನಮ್ಮ ಮೇಲೆ ಒತ್ತಡ ಹೇರಿದರು. ಆದರೂ, ಈ ವಿಷಯ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಾಗ ಅವರು ಈ ಪ್ರಕರಣದಲ್ಲಿ ಎಫ್ ಐಆರ್ ದಾಖಲಿಸಿದರು ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.
ಆರೋಪಿಗಳನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.