ಲಕ್ನೋ: ಪ್ರಚೋದನಾಕಾರಿ ಭಾಷಣ ಮಾಡಿ ಕೋಮು ಸೌಹಾರ್ದಕ್ಕೆ ಧಕ್ಕೆ ತಂದ ಆರೋಪದಲ್ಲಿ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಶತಮಾನದಷ್ಟು ಹಳೆಯ ಮಸೀದಿಯನ್ನು ಇಲ್ಲಿನ ಜಿಲ್ಲಾಡಳಿತ ಕೆಡವಿದೆ ಎಂದು ಉವೈಸಿ ಹೇಳಿದ್ದರು.ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅಲ್ಲದೆ, ಉವೈಸಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅಸಭ್ಯ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಾರಬಂಕಿ ಎಸ್ ಪಿ ಯಮುನಾ ಪ್ರಸಾದ್ ಅವರು, ಉವೈಸಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 ಎ, 188, 169 ಮತ್ತು 170 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅದೇ ರೀತಿ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರತ್ಯೇಕ ಪ್ರಕರಣ ದಾಖಿಸಲಾಗಿದೆ ಎಂದು ತಿಳಿಸಿದರು.
ಬಾರಾಬಂಕಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಉವೈಸಿ, ರಾಮಸನೇಹಿ ಘಾಟ್ ನಲ್ಲಿರುವ ಮಸೀದಿಯನ್ನು ಮೇನಲ್ಲಿ ಜಿಲ್ಲಾಡಳಿತ ಕೆಡವಿದೆ ಎಂದು ಆರೋಪಿಸಿದ್ದರು.