ರಾಯ್ಬರೇಲಿ: ಬಿಜೆಪಿ ಸೇರಿದ 2 ತಿಂಗಳ ಬಳಿಕ ಉತ್ತರಪ್ರದೇಶ ರಾಯ್ಬರೇಲಿ ಶಾಸಕಿ ಅದಿತಿ ಸಿಂಗ್ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಅದಿತಿ ಸಿಂಗ್ 2 ತಿಂಗಳ ಹಿಂದೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಕಳುಹಿಸುವ ಮೂಲಕ ಆದಿತಿ ಸಿಂಗ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ನಡೆಯುವ ಮತದಾನವು ಕ್ರಮವಾಗಿ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7 ರಂದು ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.