ಲಕ್ನೋ: ದೇಶಿ ನಿರ್ಮಿತ ಪಿಸ್ತೂಲ್ ಹೊಂದಿದ್ದ ಶಿಕ್ಷಕಿಯೊಬ್ಬಳನ್ನು ಉತ್ತರ ಪ್ರದೇಶದ ಮೈನ್ ಪುರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಫಿರೋಜಾಬಾದ್ ಶಾಲೆಯ ಶಿಕ್ಷಕಿ ಕರೀಶ್ಮಾ ಸಿಂಗ್ ಯಾದವ್ ಎಂದು ಗುರುತಿಸಲಾಗಿದೆ.
ಕರೀಶ್ಮಾ ಸಿಂಗ್ ಕೆಲವು ಕೆಲಸಗಳ ಮೇಲೆ ಮಂಗಳವಾರ ಮೈನ್ಪುರಿಗೆ ಬಂದಿದ್ದಳು. ಈ ವೇಳೆ ಮಹಿಳಾ ಪೇದೆಯೊಬ್ಬರು ಆರೋಪಿಯನ್ನು ಪರೀಕ್ಷಿಸಿ, ಆಕೆ ಧರಿಸಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ನ ಜೇಬಿನಿಂದ 315 ಬೋರ್ ಕಂಟ್ರಿಮೇಡ್ ಪಿಸ್ತೂಲ್ ಹೊರತೆಗೆದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯ ಕರಿಷ್ಮಾ ಸಿಂಗ್ ಯಾದವ್ ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡು, ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.