ಉತ್ತರ ಪ್ರದೇಶ: ತರಗತಿಯಲ್ಲಿ ವಿದ್ಯಾರ್ಥಿಗಳ ಎದುರೇ ಮದ್ಯ ಕುಡಿದ ಶಿಕ್ಷಕ ಅಮಾನತು

Prasthutha|

ಲಖನೌ: ಉತ್ತರ ಪ್ರದೇಶದ ಹಾಥರ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರ ಶಿಕ್ಷಕ ಶೈಲೆಂದರ್‌ ಸಿಂಗ್‌ ಗೌತಮ್ ತರಗತಿಯಲ್ಲಿ ವಿದ್ಯಾರ್ಥಿಗಳ ಎದುರೇ ಮದ್ಯ ಕುಡಿದ ವಿಡಿಯೊವೊಂದು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೊವನ್ನು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

- Advertisement -

ತರಗತಿಯಲ್ಲಿದ್ದ ಟೇಬಲ್ ಕೆಳಗೆ ಮತ್ತು ತಮ್ಮ ಬೆನ್ನ ಹಿಂದೆ ಬಿಯರ್ ಬಾಟಲಿಗಳನ್ನು ಮುಚ್ಚಿಟ್ಟುಕೊಂಡ ದೃಶ್ಯಗಳು ವಿಡಿಯೊದಲ್ಲಿವೆ. ನಾನು ಯಾವುದೇ ತಪ್ಪು ಮಾಡಿಲ್ಲ, ವಿಡಿಯೊ ಮಾಡಬೇಡಿ ಎಂದು ಮನವಿ ಮಾಡುತ್ತಿರುವ ದೃಶ್ಯವೂ ಸೆರೆಯಾಗಿದೆ. ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

‘ಘಟನೆಯ ಕುರಿತು ತನಿಖೆಗಾಗಿ ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ವರದಿ ಬಂದ ಬಳಿಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಲೆಯ ಆಡಳಿತ ಸಮಿತಿ ತಿಳಿಸಿದೆ.

Join Whatsapp