ಉತ್ತರ ಪ್ರದೇಶ | ಮಹಿಳೆ ಮೇಲೆ ನಾಲ್ವರು ಯುವಕರಿಂದ ಸಾಮೂಹಿಕ ಅತ್ಯಾಚಾರ

Prasthutha|

ಬಾಗ್ಪತ್: ಮಹಿಳೆಯೊಬ್ಬರ ಮೇಲೆ ಆಕೆಯ ಗ್ರಾಮದ ನಾಲ್ವರು ಯುವಕರು ಹಲವು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬಾಗ್ಪತ್ ನಲ್ಲಿ ನಡೆದಿದೆ.

- Advertisement -

ಫೆಬ್ರವರಿ 14 ರಂದು ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಹತ್ತು ದಿನಗಳ ನಂತರ, ಆರೋಪಿಗಳಾದ ಸೌರಭ್, ಕಮಲ್, ಶುಭಂ ಮತ್ತು ಸಾಗರ್ ಎಂಬ ನಾಲ್ವರು ನನ್ನ ಮನೆಗೆ ಬಂದು ಮಾದಕ ದ್ರವ್ಯ ಬೆರೆಸಿದ ತಂಪು ಪಾನೀಯ ಕುಡಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ವಿಚ್ಛೇದಿತ ಮಹಿಳೆ ತನ್ನ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಪ್ರಜ್ಞಾಹೀನಳಾಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಡೀ ಘಟನೆಯನ್ನು ಯುವಕರು ಚಿತ್ರೀಕರಿಸಿದ್ದಾರೆ. ನಂತರ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ವೀಡಿಯೊ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Join Whatsapp
Exit mobile version