ಉತ್ತರ ಕನ್ನಡ: ಭಾರಿ ಮಳೆಯಿಂದ ಗುಡ್ಡ ಕುಸಿದು 7 ಮಂದಿ ಮೃತ್ಯು

Prasthutha|

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಏಳು ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್​ಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.



Join Whatsapp