ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿದ್ದು, ಇದೀಗ ಮೊದಲ ಸಾವು ಪ್ರಕರಣ ದಾಖಲಾಗಿದೆ.
ಮಂಗನ ಕಾಯಿಲೆಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿದ್ದ ಸಿದ್ದಾಪುರದ ಜಿಡ್ಡಿ ಗ್ರಾಮದ 65 ವರ್ಷದ ಮಹಿಳೆ ಇದೀಗ ಮೃತಪಟ್ಟಿದ್ದಾರೆ.
ಈವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 43 ಮಂಗನ ಕಾಯಿಲೆ ಪ್ರಕರಣಗಳು ದಾಖಲಾಗಿವೆ. ಎಲ್ಲಾ ಪ್ರಕರಣಗಳು ಸಿದ್ದಾಪುರ ತಾಲೂಕಿನಲ್ಲೇ ಪತ್ತೆಯಾಗಿವೆ.