Home ಟಾಪ್ ಸುದ್ದಿಗಳು ಉತ್ತರ ಕನ್ನಡ: ಮಂಗನ ಕಾಯಿಲೆಗೆ 2ನೇ ಬಲಿ

ಉತ್ತರ ಕನ್ನಡ: ಮಂಗನ ಕಾಯಿಲೆಗೆ 2ನೇ ಬಲಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ.

20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸಿದ್ದಾಪುರ ತಾಲೂಕಿನಲ್ಲಿ KFD ಪ್ರಕರಣಗಳ ಸಂಖ್ಯೆ 43ಕ್ಕೇರಿದೆ. ಮತ್ತೊಂದೆಡೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನಲ್ಲಿ ನುಗ್ಗಿ ಗ್ರಾಮ ಪಂಚಾಯಿತಿಯ ಎರಡು ಹಳ್ಳಿಗಳು ಮಂಗನ ಕಾಯಿಲೆಯ ಕೇಂದ್ರ ಬಿಂದುವಾಗಿವೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಒಟ್ಟು 26 ಪ್ರಕರಣಗಳಿದ್ದು, ಈ ಪೈಕಿ 24 ಪ್ರಕರಣ ಕೊಪ್ಪ ತಾಲೂಕಿನಲ್ಲೆ ದಾಖಲಾಗಿವೆ.

Join Whatsapp
Exit mobile version