ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ ಸರ್ಕಾರಕ್ಕಿಲ್ಲ: ಸಿಎಂ ಬೊಮ್ಮಾಯಿ
Prasthutha: June 23, 2022

ನವದೆಹಲಿ: ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಚಿವ ಉಮೇಶ ಕತ್ತಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ‘ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು ಹಲವಾರು ವರ್ಷಗಳಿಂದ ಅವರು ಹೇಳಿದ್ದಾರೆ. ಅದಕ್ಕೆ ಅವರೇ ಉತ್ತರ ನೀಡಬೇಕು ಎಂದರು.
ರಸ್ತೆ ಕಾಮಗಾರಿ: ವಿವರ ನೀಡಿದರೆ ತನಿಖೆ
ಬಿಬಿಎಂಪಿ ರಸ್ತೆ ಹಾಕಿದ ಎರಡೇ ದಿನದಲ್ಲಿ ಕಿತ್ತುಹೋಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ವಿವರಗಳನ್ನು ನೀಡಿದರೆ ತನಿಖೆ ಮಾಡಿಸಲಾಗುವುದು ಮುಖ್ಯಮಂತ್ರಿಗಳು ತಿಳಿಸಿದರು.
