ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಭೂಕಂಪದ ಅನುಭವವಾಗಿದೆ. ಭೂಕಂಪನ ಹಿನ್ನೆಲೆ ಜನರು ಭಯಭೀತರಾಗಿ ಮನೆಯಿಂದ ಹೊರಬಂದಿದ್ದಾರೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯು 2.8 ರಷ್ಟಿದೆ ಎಂದು ತಿಳಿದು ಬಂದಿದೆ. ಭೂಕಂಪವು ಭೂಮಿಯ ಮೇಲ್ಮೈಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ. ಆದರೆ, ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಗಡಿನಾಡಿನ ಜಿಲ್ಲಾ ಕೇಂದ್ರವಾದ ಪಿಥೋರಗಢದಲ್ಲಿ ಹಿಂದಿನ ದಿನವೂ ಭೂಕಂಪನದ ಅನುಭವವಾಗಿತ್ತು. ಪಿಥೋರಗಢ್ನಲ್ಲಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆ 2.7 ರಷ್ಟಿದೆ. ಆದ್ರೆ ಜಿಲ್ಲೆಯಲ್ಲಿ ಎಲ್ಲಿಯೂ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.