Home ಟಾಪ್ ಸುದ್ದಿಗಳು ಉತ್ತರಾಖಂಡ ಸುರಂಗ ಕುಸಿತ: 40 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಉತ್ತರಾಖಂಡ ಸುರಂಗ ಕುಸಿತ: 40 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಉತ್ತರಾಖಂಡ: ಇಂದು ಬೆಳಿಗ್ಗೆ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದು ಕನಿಷ್ಠ 40 ಕಾರ್ಮಿಕರು ಸುರಂಗದೊಳಗಡೆ ಸಿಲುಕಿಕೊಂಡಿದ್ದಾರೆ. ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದ್ದು, ಜೀವಾಪಾಯದಲಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆಯಲ ರಕ್ಷಣಾ ಕಾರ್ಯ ಮುಂದುವರೆಯುತ್ತಿದೆ.

ಅಪಾಯದಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ತಂಡವು ಉತ್ತರಾಖಂಡ ಸರ್ಕಾರ ಮತ್ತು ಆಡಳಿತದೊಂದಿಗೆ ಅಪಘಾತದ ಸ್ಥಳಕ್ಕೆ ತಲುಪಿದೆ. ಸದ್ಯ ಸುರಂಗದಿಂದ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆಯಲು ರಕ್ಷಣಾ ಕಾರ್ಯ ನಿರಂತರವಾಗಿ ಸಾಗುತ್ತಿದೆ. ಸ್ಥಳದಲ್ಲಿ ಆಮ್ಲಜನಕ ಸಿಲಿಂಡರ್‌ಗಳನ್ನು ನಿಯೋಜಿಸಲಾಗಿದೆ. ಅದೃಷ್ಟವಶಾತ್, ಇಲ್ಲಿಯವರೆಗೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ.

ಘಟನಾ ಸ್ಥಳಕ್ಕೆ ಪೊಲೀಸ್ ಪಡೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ತಲುಪಿವೆ. ದಾಖಲೆಯ ಪ್ರಕಾರ ಸುಮಾರು 40 ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ನಾವು ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸುತ್ತೇವೆ. ಇದುವರೆಗೆ ಯಾವುದೇ ಸಾವು-ನೋವು ವರದಿಯಾಗಿಲ್ಲ’ ಎಂದು ಉತ್ತರಕಾಶಿ ಎಸ್ಪಿ ಅರ್ಪಣ್ ಯದುವಂಶಿ ಹೇಳಿದ್ದಾರೆ.

Join Whatsapp
Exit mobile version