ಸುರಂಗದಲ್ಲಿ ಸಿಲುಕಿದ್ದವರಿಗೆ 1 ಲಕ್ಷ ರೂ. ನೆರವು ಘೋಷಿಸಿದ ಉತ್ತರಾಖಂಡ ಸಿಎಂ

Prasthutha|

- Advertisement -

ಉತ್ತರಕಾಶಿ: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಿದ ಬೆನ್ನಲ್ಲೇ ಎಲ್ಲ ಕಾರ್ಮಿಕರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದಾರೆ.

ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೇ ಕಾರ್ಮಿಕರು ಗುಣಮುಖರಾಗಿ ಮನೆಗೆ ಮರಳುವ ವರೆಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂಪೂರ್ಣ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Join Whatsapp