ಬಿಜೆಪಿಗೆ ರಾಜೀನಾಮೆ ನೀಡಿದ ವಿ.ಎಸ್ ಅಭಿಷೇಕ್ ನಾಯ್ಡು

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ವಿ.ಎಸ್ ಅಭಿಷೇಕ್ ನಾಯ್ಡು ಅವರು ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.


ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಇತ್ತೀಚಿಗೆ ಬೆಳವಣಿಗೆಯಿಂದ ಬೇಸರಗೊಂಡು ಬಿಜೆಪಿಯಿಂದ ದೂರ ಉಳಿದಿದ್ದೆ. ಈಗ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.