Home ಟಾಪ್ ಸುದ್ದಿಗಳು 12ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ವಿತರಣೆ; ಎರಡು ಡೋಸ್ ಗಳ ಮಧ್ಯೆ 28...

12ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ವಿತರಣೆ; ಎರಡು ಡೋಸ್ ಗಳ ಮಧ್ಯೆ 28 ದಿನಗಳ ಕಾಲಾವಕಾಶ

ಹೊಸದಿಲ್ಲಿ: 12ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಮಾ.16 ರಿಂದ ಕೊರ್ಬೆವ್ಯಾಕ್ಸ್‌ ಲಸಿಕೆ ವಿತರಣೆ ಆರಂಭವಾಗಲಿದೆ. ಅದಕ್ಕೆ ಸಂಬಂಧಿಸಿದ ನಿಯಮಗಳನ್ನು ಮಂಗಳವಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು,ಮೊದಲ ಮತ್ತು ಎರಡನೇ ಡೋಸ್‌ ನಡುವೆ 28 ದಿನಗಳ ಅಂತರ ಇರಬೇಕು ಎಂದು ಸೂಚಿಸಲಾಗಿದೆ.

2010ನೇ ಇಸವಿಯಲ್ಲಿ ಜನಿಸಿದವರು ಮತ್ತು ಈಗಾಗಲೇ 12 ವರ್ಷ ಪೂರ್ತಿಗೊಂಡವರು ಕೋವಿನ್‌ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಅರ್ಹರಾಗಿದ್ದು,ಕೋವಿನ್‌ ವೆಬ್‌ಸೈಟ್‌ನಲ್ಲಿ ಕುಟುಂಬ ಸದಸ್ಯರು ಹೊಂದಿರುವ ಖಾತೆಯ ಮೂಲಕವೂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಇದೇ ವೇಳೆ, ಇತರ ಆರೋಗ್ಯ ಸಮಸ್ಯೆ (ಕೊ-ಮಾರ್ಬಿಡಿಟಿ) ಇಲ್ಲದೇ ಇರುವ 60 ವರ್ಷ ಮೇಲ್ಪಟ್ಟವರಿಗೆ ಕೂಡ ಲಸಿಕೆ ಹಾಕಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. ಮಕ್ಕಳಿಗೆ ಲಸಿಕೆ ನೀಡುವ ತಂಡಗಳಿಗೆ ಸೂಕ್ತ ತರಬೇತಿ ನೀಡುವಂತೆಯೂ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

Join Whatsapp
Exit mobile version