Home ಟಾಪ್ ಸುದ್ದಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ: ಮೂವರು ಅಧಿಕಾರಿಗಳ ಮೇಲೆ FIR

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ: ಮೂವರು ಅಧಿಕಾರಿಗಳ ಮೇಲೆ FIR

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್(52) ಎಂಬುವವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನ ಅಧಿಕಾರಿಗಳಾದ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್, ಬ್ಯಾಂಕ್ ಅಧಿಕಾರಿ ಸುಚಿಸ್ಥನಾ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇನ್ನು ಘಟನೆ ಕುರಿತು ಮಾತನಾಡಿದ ಮೃತ ಚಂದ್ರಶೇಖರ್ ಪತ್ನಿ ಕವಿತಾ, ‘ ನನ್ನ ಪತಿ ಯಾವುದೇ ತಪ್ಪು ಮಾಡಿಲ್ಲ, ಲೂಟಿಯನ್ನೂ ಮಾಡಿಲ್ಲ. ಒತ್ತಡ ಹಾಕಿ ನನ್ನ ಪತಿ ಜೀವ ತೆಗೆದಿದ್ದಾರೆ. ಡೆತ್ ನೋಟ್ ನಲ್ಲಿ ಅವರು ಎಲ್ಲವನ್ನೂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ನನ್ನ ಪತಿ ನಿಯತ್ತಿನ ನಾಯಿ ರೀತಿ ಸರ್ಕಾರದ ಕೆಲಸ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ತಾರೆ ಅಂದರೆ ಎಷ್ಟು ಒತ್ತಡ ಇತ್ತು ಊಹೆ ಮಾಡಿ ಎಂದು ಹೇಳಿದ್ದಾರೆ.

Join Whatsapp
Exit mobile version