ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ಆಪ್ತ ಸಹಾಯಕ ಹರೀಶ್ ವಶಕ್ಕೆ ಪಡೆದ ಇಡಿ

Prasthutha|

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ವಶಕ್ಕೆ ಪಡೆದಿದ್ದಾರೆ.

- Advertisement -


ಇಲ್ಲಿನ ಸದಾಶಿವನಗರದ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಅವರ ಫ್ಲ್ಯಾಟ್ ಗಳ ಮೇಲೆ ಬುಧವಾರ ಬೆಳಿಗ್ಗೆ ದಾಳಿ ಮಾಡಿರುವ ಇ.ಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಅಲ್ಲಿಯೇ ಇದ್ದ ಹರೀಶ್ ಅವರನ್ನು ಮಧ್ಯಾಹ್ನ ತನಿಖಾ ತಂಡ ವಶಕ್ಕೆ ಪಡೆಯಿತು. ಅಲ್ಲಿಂದ ಶಾಂತಿ ನಗರದಲ್ಲಿರುವ ಇ.ಡಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.

Join Whatsapp