Home ಟಾಪ್ ಸುದ್ದಿಗಳು ವಂದೇ ಮಾತರಂ ನಮ್ಮ ರಾಷ್ಟ್ರಗೀತೆ ಆಗಬೇಕು: ರಾಮಗಿರಿ ಮಹಾರಾಜ್

ವಂದೇ ಮಾತರಂ ನಮ್ಮ ರಾಷ್ಟ್ರಗೀತೆ ಆಗಬೇಕು: ರಾಮಗಿರಿ ಮಹಾರಾಜ್

ಮಹಾರಾಷ್ಟ್ರ: ವಂದೇ ಮಾತರಂ ದೇಶದ ರಾಷ್ಟ್ರಗೀತೆ ಆಗಬೇಕು ಎಂದು ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಗೀತೆಯನ್ನು 1911ರಲ್ಲಿ ಕೋಲ್ಕತ್ತದಲ್ಲಿ ರವೀಂದ್ರನಾಥ್ ಟ್ಯಾಗೋರ್ ಹಾಡಿದ್ದರು. ಆ ಸಮಯದಲ್ಲಿ ದೇಶಕ್ಕೆ ಇನ್ನೂ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಭಾರತದಲ್ಲಿ ಅನ್ಯಾಯ ಎಸಗುತ್ತಿದ್ದ ಬ್ರಿಟಿಷ್ ದೊರೆ ಜಾರ್ಜ್. ವಿ ಎದುರು ಟ್ಯಾಗೋರ್ ಈ ಗೀತೆಯನ್ನು ಹಾಡಿದ್ದರು. ದೇಶವನ್ನು ಪ್ರತಿನಿಧಿಸಲು ಈ ಗೀತೆಯನ್ನು ಹಾಡಿರಲಿಲ್ಲ’ಎಂದು ರಾಮಗಿರಿ ಮಹಾರಾಜ್ ಹೇಳಿದ್ದಾರೆ.

‘ವಂದೇ ಮಾತರಂ ಅನ್ನು ರಾಷ್ಟ್ರಗೀತೆಯಾಗಿ ಘೋಷಿಸಲು ನಾವು ಹೋರಾಟ ಸಂಘಟಿಸಬೇಕಿದೆ. ವಂದೇ ಮಾತರಂ ನಮ್ಮ ರಾಷ್ಟ್ರಗೀತೆ ಆಗಲೇಬೇಕು’ಎಂದಿದ್ದಾರೆ.

Join Whatsapp
Exit mobile version