ವಾರಾಣಸಿ: ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಜ್ಞಾನವಾಪಿ ಮಸೀದಿಯ ನಿರ್ವಹಣಾ ಸಮಿತಿ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಶುಕ್ರವಾರ ಪಟ್ಟಣದಲ್ಲಿ ಬಂದ್ ಗೆ ಕರೆ ನೀಡಿತ್ತು.
ಸಮಿತಿಯು ಮುಸ್ಲಿಮರಿಗೆ ಶುಕ್ರವಾರ ತಮ್ಮ ಅಂಗಡಿಗಳು ಮತ್ತು ವ್ಯವಹಾರಗಳನ್ನು ಮುಚ್ಚುವಂತೆ ಮತ್ತು ಆಯಾ ನಗರಗಳು ಮತ್ತು ಪ್ರದೇಶಗಳಲ್ಲಿ ನಮಾಜ್ ಸಲ್ಲಿಸುವಂತೆ ಮನವಿ ಮಾಡಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಆವರಣದ ಸುತ್ತಲೂ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಬಂದ್ ಹಿನ್ನೆಲೆಯಲ್ಲಿ ನಗರದ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿನ ಅಂಗಡಿಗಳು ಮುಂಗಟ್ಟು ಮುಚ್ಚಿವೆ. ದಲ್ಮಂಡಿ, ನೈ ಸಡಕ್, ನಾಡೆಸರ್ ಮತ್ತು ಅರ್ದಲ್ ಬಜಾರ್ನ ಮಾರುಕಟ್ಟೆ ಪ್ರದೇಶಗಳಲ್ಲಿ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.