Home ಟಾಪ್ ಸುದ್ದಿಗಳು ಭೀಮಾ ಕೊರೆಗಾಂವ್‌ ಪ್ರಕರಣ| ವರವರ ರಾವ್‌ ಗೆ ಜಾಮೀನು

ಭೀಮಾ ಕೊರೆಗಾಂವ್‌ ಪ್ರಕರಣ| ವರವರ ರಾವ್‌ ಗೆ ಜಾಮೀನು

ಮುಂಬೈ: ಭೀಮಾ ಕೊರೆಗಾಂವ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಖ್ಯಾತ ಕವಿ ಹಾಗೂ ಸಾಮಾಜಿಕ ಹೋರಾಟಗಾರ ವರವರರಾವ್‌ ಅವರಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದೆ.

ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಮುಂಬೈನಲ್ಲೇ ಉಳಿದುಕೊಂಡು ವಿಚಾರಣೆಗೆ ಲಭ್ಯವಿರಬೇಕೆಂದು ಅವರಿಗೆ ಸೂಚಿಸಲಾಗಿದೆ.

ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು,  2017ರ ಡಿಸೆಂಬರ್ 31ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಕೊರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರಕ್ಕೆ ಕಾರಣವಾಗಿತ್ತು ಎಂದು ಪೊಲೀಸರು ಹೇಳಿಕೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 9 ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು.

Join Whatsapp
Exit mobile version