ಇಂದಿರಾ ಕ್ಯಾಂಟೀನ್ ನಲ್ಲಿ ಸಿಗಲಿದೆ ವೆರೈಟಿ ಊಟ: ಮಂಗಳೂರು ಬನ್ಸ್ ಸೇರ್ಪಡೆ

Prasthutha|

ಬೆಂಗಳೂರು: ಇಂದಿರಾ ಕ್ಯಾಂಟೀನ್ ಪುನಶ್ಚೇತನಕ್ಕೆ ಆದ್ಯತೆ ನೀಡಿ ಹೊಸ ರೂಪದಲ್ಲಿ ಜನರಿಗೆ ಪರಿಚಯಿಸಲು ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು ಇದರ ಪರಿಣಾಮ ಈಗಾಗಲೇ ಇಂದಿರಾ ಕ್ಯಾಂಟೀನ್ಮೆನು ಮತ್ತು ದರದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಮಾತ್ರವಲ್ಲ ಗುಣಮಟ್ಟದ ಜೊತೆಗೆ ಶುಚಿ-ರುಚಿ ಊಟ ನೀಡಲು ಒತ್ತು ನೀಡಲಾಗಿದೆ.

- Advertisement -


ಇಂದಿರಾ ಕ್ಯಾಂಟೀನ್ ನಲ್ಲಿ ಬಗೆ ಬಗೆಯ ತಿಂಡಿ ತಿನಿಸುಗಳು ಇನ್ಮುಂದೆ ಸಿಗಲಿವೆ. ಇಡ್ಲಿ ಚಟ್ನಿ/ ಸಾಂಬಾರ್, ಬ್ರೆಡ್ & ಜಾಮ್, ಮಂಗಳೂರು ಬನ್ಸ್, ಬೇಕರಿ ಬನ್, ಪಲಾವ್, ಟೊಮ್ಯಾಟೊ ಬಾತ್, ಖಾರಾ ಪೊಂಗಲ್, ಬಿಸಿಬೇಳೆ ಬಾತ್, ಅನ್ನ ಸಾಂಬಾರ್, ರಾಗಿ ಮುದ್ದೆ ಸೊಪ್ಪುಸಾರು, ಚಪಾತಿ & ಪಲ್ಯ, ಟೀ ಕಾಫಿ ಇಂದಿರಾ ಕ್ಯಾಂಟೀನ್ ನಲ್ಲಿ ಸಿಗಲಿದೆ.
2017ರಲ್ಲಿ ಸಿದ್ದರಾಮಯ್ಯ ಸರ್ಕಾರ ಮೊದಲ ಬಾರಿಗೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿತು. ಆದ್ರೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಯಾಂಟೀನ್ ಗಳು ಹಳ್ಳ ಹಿಡಿದಿದ್ದವು. ಸದ್ಯ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್ಗಳಿಗೆ ಮರು ಜೀವ ನೀಡಲಾಗುತ್ತಿದೆ.



Join Whatsapp