ನವದೆಹಲಿ: ರಾತ್ರಿ ವೇಳೆಯಲ್ಲಿ ಕರ್ಫ್ಯೂ ಜಾರಿ ಮಾಡುವುದು ಮತ್ತು ಹಗಲು ರಾಜಕೀಯ ಸಮಾವೇಶಕ್ಕಾಗಿ ಲಕ್ಷಾಂತರ ಜನರನ್ನು ಒಗ್ಗೂಡಿಸುವುದು. ಇದು ಜನಸಾಮಾನ್ಯರಿಗೆ ಅರ್ಥವಾಗುತ್ತಿಲ್ಲ’ ಎಂದು ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಬೃಹತ್ ಚುನಾವಣಾ ಸಮಾವೇಶಗಳನ್ನು ನಡೆಸುತ್ತಿರುವುದರ ವಿರುದ್ಧ ಸಂಸದ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವರುಣ್ ಗಾಂಧಿ, ರಾತ್ರಿ ವೇಳೆಯಲ್ಲಿ ಕರ್ಫ್ಯೂ ಜಾರಿ ಮಾಡುವುದು ಮತ್ತು ಹಗಲು ರಾಜಕೀಯ ಸಮಾವೇಶಕ್ಕಾಗಿ ಲಕ್ಷಾಂತರ ಜನರನ್ನು ಒಗ್ಗೂಡಿಸುವುದು. ಇದು ಜನಸಾಮಾನ್ಯರಿಗೆ ಅರ್ಥವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಉತ್ತರಪ್ರದೇಶದಲ್ಲಿರುವ ನಿಗದಿತ ಆರೋಗ್ಯ ಕೇಂದ್ರಗಳನ್ನು ಗಮನಿಸಿದರೆ, ನಮ್ಮ ಆದ್ಯತೆ ಗಂಭೀರ ಸ್ವರೂಪದ ಒಮಿಕ್ರಾನ್ ಹರಡುವುದನ್ನು ತಡೆಗಟ್ಟುವುದಾಗಿದೆಯೋ ಅಥವಾ ಚುನಾವಣಾ ಕಣದ ಶಕ್ತಿಯ ಪ್ರದರ್ಶನ ಮಾಡುವುದೇ ನಮ್ಮ ಆದ್ಯತೆಯಾಗಿದೆಯೇ ಎಂಬುದನ್ನು ನಾವು ಪ್ರಾಮಾಣಿಕವಾಗಿ ನಿರ್ಧರಿಸಬೇಕಾಗಿದೆ ಎಂದು ಗಾಂಧಿ ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ಹರಿಹಾಯ್ದಿದ್ದಾರೆ.