ನವದೆಹಲಿ: ಸ್ವಪಕ್ಷೀಯರ ವಿರುದ್ಧವೇ ಕೆಂಡಕಾರಿ ನಾಯಕರ ಕೆಂಗಣ್ಣಿಗೆ ಗುರಿಯಾಗುವ ಬಿಜೆಪಿ ಸಂಸದ ವರುಣ್ ಗಾಂಧಿ ಮತ್ತೆ ಕೇಂದ್ರ ಹಾಗೂ ನರೇಂದ್ರ ಮೋದಿಗೆ ಟಾಂಗ್ ನೀಡಿದ್ದಾರೆ. ಪ್ರಧಾನಿ ಮೋದಿಯ 10 ಲಕ್ಷ ಉದ್ಯೋಗದ “ಮಿಷನ್ ಮೋಡ್” ಘೋಷಣೆಗೆ ಪ್ರತಿಕ್ರಿಯಿಸಿರುವ ವರುಣ್ ಗಾಂಧಿ, ಹೊಸ ಉದ್ಯೋಗಗಳನ್ನು ಸೃಷ್ಟಿಸುವುದರೊಂದಿಗೆ 1 ಕೋಟಿಗೂ ಹೆಚ್ಚು ಮಂಜೂರಾದ ಮತ್ತು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ ಎಂದಿದ್ದಾರೆ.
ಪ್ರಧಾನಿ ಮೋದಿ ನಿರುದ್ಯೋಗಿ ಯುವಕರ ನೋವು ಮತ್ತು ಭಾವನೆಗಳನ್ನು ಅರ್ಥಮಾಡಿಕೊಂಡಿದ್ದಕ್ಕಾಗಿ ಧನ್ಯವಾದಗಳು. ಹೊಸ ಉದ್ಯೋಗಗಳನ್ನು ಸೃಷ್ಟಿಸುವುದರೊಂದಿಗೆ 1 ಕೋಟಿಗೂ ಹೆಚ್ಚು ಮಂಜೂರಾದ ಮತ್ತು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ನಾವು ಅರ್ಥಪೂರ್ಣ ಪ್ರಯತ್ನಗಳನ್ನು ತ್ವರಿತಗತಿಯಲ್ಲಿ ಮಾಡಿಕೊಂಡು ಪ್ರತಿ ವರ್ಷ 2 ಕೋಟಿ ಉದ್ಯೋಗವಕಾಶಗಳನ್ನು ನೀಡುವ ಭರವಸೆಯನ್ನು ಪೂರ್ಣಗೊಳಿಸಬೇಕು ಎಂದು ವರುಣ್ ಗಾಂಧಿ ಹೇಳಿದ್ದಾರೆ.
ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಹುದ್ದೆಗಳಿಗೆ ಮಿಷನ್ ಮೋಡ್‌ನಲ್ಲಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿರುವುದಾಗಿ ಇಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿತ್ತು.