ದಾವಣಗೆರೆ: ರಾಜ್ಯ ಪ್ರಶಸ್ತಿ ವಿಜೇತ, ಪರಿಸರ ಪ್ರೇಮಿ, ಸಾಲು ಮರದ ವೀರಾಚಾರಿ ಎಂದೇ ಖ್ಯಾತಿ ಪಡೆದಿದ್ದ ಮಿಟ್ಲಕಟ್ಟೆ ವೀರಾಚಾರಿ ಮಧ್ಯರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ದಾವಣಗೆರೆ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ.
ಮಿಟ್ಲಕಟ್ಟೆ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದರು. ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಸೂಕ್ತವಾಗಿ ಅಕ್ಕಿ ವಿತರಣೆಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವೀರಾಚಾರಿ ಅವರು 3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ದಾವಣಗೆರೆ ಜಿಲ್ಲೆಯಲ್ಲಿ ಚಿರಪರಿಚಿತರಾಗಿದ್ದರು.