ವೀರಪ್ಪ ಮೊಯ್ಲಿ, ನಲಪಾಡ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

Prasthutha|

ಬೆಂಗಳೂರು: ಪ್ರತಿಭಟನೆಯ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹಾಜರಾಗದ ಹಿನ್ನೆಲೆಯಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮೊಹಮ್ಮದ್ ನಲಪಾಟ್ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

- Advertisement -

2022ರ ಆಗಸ್ಟ್‌ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಕೋರ್ಟ್ ಕರೆದಿದ್ದರೂ ನಿರಂತರವಾಗಿ ಇವರು ಗೈರು ಹಾಜರಿ ಆಗಿದ್ದರು. ಈ ಹಿನ್ನಲೆಯಲ್ಲಿ ವೀರಪ್ಪ ಮೊಯ್ಲಿ ಹಾಗೂ ಮೊಹಮ್ಮದ್ ನಲಪಾಡ್ ವಿರುದ್ಧ ಜಾಮೀನು ರಹಿತ ವಾರೆಂಟ್ ಅನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಾರಿಗೊಳಿಸಿದೆ.



Join Whatsapp