ಬೆಳಗಾವಿ: ನನ್ನ ಮೈಯಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮನ ರಕ್ತ ಹರಿಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ವಿಶ್ವಗುರು ಬಸವಣ್ಣನವರ ತತ್ವ ನಂಬಿದವರು. ನಾವು ಡಾ.ಬಾಬಾಸಾಹೇಬ ಅಂಬೇಡ್ಕರ್ ಸಂವಿಧಾನ ಒಪ್ಪಿಕೊಂಡವರು. ನಮ್ಮ ಬಗ್ಗೆ ಯಾರು ಮಾತನಾಡುತ್ತಿದ್ದಾರೋ ಅವರಿಗೆ ಬುದ್ಧಿ ಭ್ರಮಣೆ ಆಗಿದೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿಗೆ ತಿರುಗೇಟು ನೀಡಿದರು.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸ ಲಾತಿ ಹೋರಾಟದಲ್ಲಿ ನಾನು, ನನ್ನ ಮಗ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇವೆ. ನನ್ನ ಮಗನ ಮೈಯಲ್ಲಿ ಪಂಚಮಸಾಲಿ ರಕ್ತ ಹರಿಯುತ್ತಿದೆ ಎಂದು ಹೇಳಿದ್ದಾರೆ.