Home ಟಾಪ್ ಸುದ್ದಿಗಳು ‘ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ’: ಸಿಎಂಗೆ ಪತ್ರ ಬರೆದ ವೀರೇಂದ್ರ ಹೆಗ್ಗಡೆ

‘ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ’: ಸಿಎಂಗೆ ಪತ್ರ ಬರೆದ ವೀರೇಂದ್ರ ಹೆಗ್ಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 14ನೇ ಬಜೆಟ್ ನ ಫಲಶ್ರುತಿಯನ್ನು ಶ್ಲಾಘಿಸಿ ಹಾಗೂ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಹೆಗ್ಗಡೆಯವರು ಪತ್ರವನ್ನು ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ.

ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಹೀಗಾಗಿ ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗುವಂತೆ ಹೆಗ್ಗಡೆಯವರು ಪತ್ರದಲ್ಲಿ ತಿಳಿಸಿದ್ದಾರೆ.

Join Whatsapp
Exit mobile version