ಉಳ್ಳಾಲ: ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ವಾಹನ ಸಂಚಾರ ಎರಡು ದಿನ ಮುಂದೂಡಿಕೆ ಮಾಡಲಾಗಿದೆ.
ಏಪ್ರಿಲ್ 1ರಿಂದ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರ ಆರಂಭಗೊಳ್ಳಲಿದೆ ಎಂದು ಹೇಳಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದ ಎರಡು ದಿನಗಳ ಕಾಲ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸೇತುವೆಯನ್ನು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಸುವಂತಿಲ್ಲ. ಆದರೆ ಗ್ರಾಮಸ್ಥರು ಸೇತುವೆಯ ಬಳಕೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡ ಮೇರೆಗೆ ಅಧಿಕಾರಿಗಳು ಮನವಿಗೆ ಸ್ಪಂದಿಸಿ ಅವಕಾಶ ಕಲ್ಪಿಸಿದ್ದಾರೆ.